Cini NewsSandalwood

ಏಪ್ರಿಲ್ 11ಕ್ಕೆ ರಂಗಾಯಣ ರಘು ನಟನೆಯ “ಅಜ್ಞಾತವಾಸಿ” ಸಿನಿಮಾ ಬಿಡುಗಡೆ

ಕವಲುದಾರಿ, ಗೋಧಿಬಣ್ಣ ಸಾಧಾರಣ ಮೈಕಟ್ಟು ಹಾಗೂ ಸಪ್ತ ಸಾಗರದಾಚೆ ಎಲ್ಲೋ ಸರಣಿ ಸಿನಿಮಾಗಳ ಸಾರಥಿ ಹೇಮಂತ್ ರಾವ್ ನಿರ್ಮಾಣದ ಬಹುನಿರೀಕ್ಷಿತ ಚಿತ್ರ ಅಜ್ಞಾತವಾಸಿ. ‘ಗುಳ್ಟು’ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಆಕ್ಷನ್ ಕಟ್ ಹೇಳಿರುವ ಅಜ್ಞಾತವಾಸಿ ಟೀಸರ್ ಈಗಾಗಲೇ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ. ಇದೀಗ ಚಿತ್ರತಂಡ ಸಿನಿಮಾವನ್ನು ಬೆಳ್ಳಿತೆರೆಗೆ ತರಲು ಸಜ್ಜಾಗಿದೆ. ಅದರಂತೆ ಅಜ್ಣಾತವಾಸಿ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿ ಮಾಡಲಾಗಿದೆ. ಏಪ್ರಿಲ್ 11ಕ್ಕೆ ರಾಜ್ಯಾದ್ಯಂತ ಅಜ್ಞಾತವಾಸಿ ಅಬ್ಬರ ಶುರುವಾಗಲಿದೆ.

ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಅಜ್ಞಾತವಾಸಿಯಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ. ಜನಾರ್ಧನ್ ಚಿಕ್ಕಣ್ಣ ಗುರುಗಳಾದ ಕೃಷ್ಣರಾಜ್ ಅವರು ಅಜ್ಞಾತವಾಸಿ ಚಿತ್ರಕ್ಕೆ ಕಥೆ ಬರೆದ್ದಾರೆ. 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಕಥಾಹಂದರ ಚಿತ್ರದಲ್ಲಿದೆ.

ಅದ್ವೈತ ಛಾಯಾಗ್ರಾಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ, ಭರತ್ ಎಂ.ಸಿ ಸಂಕಲನಕಾರರಾಗಿ, ಉಲ್ಲಾಸ್ ಹೈದೂರು ಕಲಾ ನಿರ್ದೇಶಕರಾಗಿ ಅಜ್ಞಾತವಾಸಿ ಚಿತ್ರದಲ್ಲಿ ಕಾರ್ಯನಿರ್ವಾಹಿಸಿದ್ದಾರೆ. ಎನ್ ಹರಿಕೃಷ್ಣ ಸಹ ನಿರ್ದೇಶಕರಾಗಿ ದುಡಿದಿದ್ದು, ಜಿ.ಬಿ.ಭರತ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

ಮಾರ್ಚ್ ನಲ್ಲಿ ಹಾಡುಗಳ ಅಬ್ಬರ
ಅಜ್ಞಾತವಾಸಿ ಸಿನಿಮಾದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಮಾಡುತ್ತಿದ್ದಂತೆ ಚಿತ್ರತಂಡ ಪ್ರಚಾರಕ್ಕೆ ಭರ್ಜರಿ ಪ್ಲಾನ್ ಮಾಡಿಕೊಂಡಿದೆ. ಮಾರ್ಚ್ ತಿಂಗಳಲ್ಲಿ ಹಾಡುಗಳ ಮೂಲಕ ಸಿನಿಮಾ ಪ್ರೇಮಿಗಳಿಗೆ ಅಜ್ಞಾತವಾಸಿ ಬಳಗ ಆಹ್ವಾನ ಕೊಡಲಿದೆ.

ತಾಯಿ ಹೆಸ್ರಲ್ಲಿ ಹೇಮಂತ್ ರಾವ್ ನಿರ್ಮಾಣ ಸಂಸ್ಥೆ
ಹಂಬಲ್ ಪೊಲಿಟಿಷಿಯನ್ ನಾಗರಾಜ್ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾಗಿ ಸಾಥ್ ಕೊಟ್ಟಿದ್ದ ಹೇಮಂತ್ ರಾವ್ ಅಜ್ಞಾತವಾಸಿ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ಮಾಪಕರಾಗಿ ಹೆಜ್ಜೆ ಇಟ್ಟಿದ್ದಾರೆ. ಹೇಮಂತ್ ಅವರು ತಮ್ಮ ತಾಯಿ ನೆನಪಿನಲ್ಲಿ ದಾಕ್ಷಾಯಿಣಿ ಟಾಕೀಸ್ ಎಂಬ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ. ಈ ನಿರ್ಮಾಣ ಸಂಸ್ಥೆಯ ಚೊಚ್ಚಲ‌ ಕಾಣಿಕೆಯೇ ಅಜ್ಞಾತವಾಸಿ. ದ್ರಾಕ್ಷಾಯಿಣಿ ಟಾಕೀಸ್ ನಡಿ ನಿರ್ಮಾಣವಾಗುತ್ತಿರುವ ಚೊಚ್ಚಲ ಚಿತ್ರ ಇದಾಗಿದೆ.

error: Content is protected !!