Cini NewsSandalwood

ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ “ಸೂತ್ರಧಾರಿ” ಚಿತ್ರತಂಡ.

ಖ್ಯಾತ ನಿರ್ಮಾಪಕ, ನಿರ್ದೇಶಕ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಸ್ಥಾಪಕ ನವರಸನ್ ನಿರ್ಮಾಣದ, ಕಿರಣ್ ಕುಮಾರ್ ನಿರ್ದೇಶನದ ಹಾಗೂ ಜನಪ್ರಿಯ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ಸೂತ್ರಧಾರಿ” ಚಿತ್ರ ಮೇ 9 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಚಿತ್ರ ಬಿಡುಗಡೆಗೂ ಮುನ್ನ ನಿರ್ಮಾಪಕ ನವರಸನ್, ನಿರ್ದೇಶಕ ಕಿರಣ್ ಕುಮಾರ್, ನಾಯಕ ಚಂದನ್ ಶೆಟ್ಟಿ ಹಾಗೂ ನಾಯಕಿ ಅಪೂರ್ವ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲೆಂದು ಏಳುಬೆಟ್ಟದ ಒಡೆಯನ ಹತ್ತಿರ ಚಿತ್ರತಂಡದ ಸದಸ್ಯರು ಪ್ರಾರ್ಥನೆ ಮಾಡಿದ್ದಾರೆ.

ಕಾಣಿಪಕ್ಕಂ ನ ಗಣೇಶ,‌ ತಿರುಚಾನೂರು ಪದ್ಮಾವತಿ ಅಮ್ಮನವರು ಹಾಗೂ ಗೋಲ್ಡನ್ ಟಂಪಲ್ ನ ಮಹಾಲಕ್ಷ್ಮಿ ದೇವಸ್ಥಾನಕ್ಕೂ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

error: Content is protected !!