“ಮಾಫಿಯಾ” ಚಿತ್ರದ ಡಬ್ಬಿಂಗ್ ಮುಕ್ತಾಯ
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ “ಮಾಫಿಯಾ” ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ ನಲ್ಲಿ ಟೀಸರ್ ಬರಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಸಿನಿಮಾ ತೆರೆಗೆ ಬರಲಿದೆ.
ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.
ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.