Cini NewsSandalwood

“ಮಾಯಾನಗರಿ” ಯ ಲಚ್ಚಿ..ಲಚ್ಚಿ.. ಸಾಂಗ್ ರಿಲೀಸ್.

ಬೆಳ್ಳಿ ಪರದೆ ಮೇಲೆ ಮತ್ತೊಮ್ಮೆ ವಿಭಿನ್ನ ಬಗೆಯ ಲವ್, ಹಾರರ್, ಥ್ರಿಲ್ಲರ್, ಸಿನಿಮಾ ಬದುಕಿನ ಕಥಾಂದರವನ್ನು ಒಳಗೊಂಡಿರುವಂತಹ “ಮಾಯಾನಗರಿ” ಚಿತ್ರದ ಲಚ್ಚಿ.. ಲಚ್ಚಿ.. ಎಂಬ ಪ್ರೇಯಸಿಯನ್ನ ಹೊಗಳುವ ಗೀತೆಯನ್ನು ರೀಲ್ಸ್ ನಲ್ಲೇ ಫೇಮಸ್ ಆಗಿ, ಲಕ್ಷಾಂತರ ಫಾಲೋವರ್ಸ್ ಹೊಂದಿರುವ 5 ವರ್ಷದ ಪುಟಾಣಿ ನಿಶಿತಾ ಕೈಲಿ ಈ ಲಚ್ಚಿ.. ಹಾಡನ್ನು ಬಿಡುಗಡೆಗೊಳಿಸಲಾಯಿತು. ಈಗಾಗಲೇ ಈ ಹಾಡು ಎಲ್ಲೆಡೆ ಬಾರಿ ವೈರಲ್ ಆಗಿದ್ದು , ಚಿತ್ರತಂಡ ಪ್ರಚಾರದ ಕಾರ್ಯವನ್ನು ಆರಂಭಿಸಿದೆ. ಸ್ಯಾಂಡಲ್ವುಡ್ ನ ಮತ್ತೊಬ್ಬ ಆಕ್ಟಿವ್ ಹೀರೋ ಅನೀಶ್ ತೇಜೇಶ್ವರ್ ನಾಯಕನಾಗಿ ವಿಭಿನ್ನ ಶೇಡಿನಲ್ಲಿ ಅಭಿನಯಿಸಿರುವ ಈ ಚಿತ್ರದಲ್ಲಿ ತೇಜು ಹಾಗೂ ಶ್ರಾವ್ಯರಾವ್ ಪ್ರಮುಖ ಪಾತ್ರಗಳಲ್ಲಿ ನಡೆಸಿದ್ದು , ಈ ಚಿತ್ರಕ್ಕೆ ಶಂಕರ್ ಆರಾಧ್ಯ ಕಥೆ , ಚಿತ್ರಕಥೆ ಬರೆದು ನಿರ್ಮಾಣದ ಜೊತೆಗೆ ನಿರ್ದೇಶನವನ್ನು ಕೂಡ ಮಾಡಿದ್ದಾರೆ.

ಈ ಸಿನಿಮಾದ ಮುಖ್ಯ ಕಥಾವಸ್ತು ಚಿತ್ರರಂಗದಲ್ಲಿ ನಡೆಯುವ ಒಂದಷ್ಟು ಸತ್ಯ ಘಟನೆಗಳನ್ನಿಟ್ಟುಕೊಂಡು , ಅದಕ್ಕೊಂದು ವಿಭಿನ್ನ ತಿರುವುಗಳನ್ನ ನೀಡುವ ಮೂಲಕ ಜನರಿಗೆ ಮನೋರಂಜನೆಯ ನೀಡಲು ಮುಂದಾಗಿದ್ದಾರಂತೆ. ಈ ಚಿತ್ರಕ್ಕೆ ಕಲಾವಿದರು , ತಂತ್ರಜ್ಞರು ಎಲ್ಲರೂ ತುಂಬ ಸಹಕಾರ ನೀಡಿದ್ದು , ಬಹಳಷ್ಟು ಅಡೆತಡೆಗಳು ಇದರಾದರೂ ಅದೆಲ್ಲವನ್ನು ಎದುರಿಸಿ ಈಗ ಚಿತ್ರ ಒಂದು ಉತ್ತಮ ಮಟ್ಟಕ್ಕೆ ಬಂದು ಬಿಡುಗಡೆಗೆ ಸಿದ್ಧವಾಗಿದೆಯಂತೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್, ಈ ಹಾಡು ನಮ್ಮ ಚಿತ್ರಕ್ಕೆ ಟ್ರಂಪ್ ಕಾರ್ಡ್ ಆಗುತ್ತೆ ಅಂತ ಕಲರ್ ಫುಲ್ ಆಗಿಯೇ ಶೂಟ್ ಮಾಡಿದ್ದೇವೆ. ಕಂಠೀರವ ಸ್ಟುಡಿಯೋ ಹಾಗೂ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ 6 ದಿನ ಇದನ್ನು ಚಿತ್ರೀಕರಿಸಿದ್ದೇವೆ. ಹಾರರ್, ಆ್ಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್ ಕಥೆ ಇದಾಗಿದ್ದು, ಚಿತ್ರದಲ್ಲಿ ನಾಯಕ ಶಂಕರ್ ನಾಗ್ ಅಭಿಮಾನಿ, ಚಿತ್ರರಂಗದಲ್ಲಿ ದೊಡ್ಡ ನಿರ್ದೇಶಕನಾಗಬೇಕೆಂದು ಹೋರಾಟ ನಡೆಸುವ ಆತನಿಗೆ ಕೊನೆಗೂ ಒಂದು ಅವಕಾಶ ಸಿಕ್ಕಿ, ಮಾಯಾನಗರಿ ಎಂಬ ಸ್ಥಳಕ್ಕೆ ಹೋಗಬೆಕಾಗುತ್ತದೆ.

ಆ ಊರಿಗೆ ಬರುವ ಆತ ಅಲ್ಲಿ ತಾನೇ ಪಾತ್ರವಾಗಬೇಕಾ ಗುತ್ತದೆ. ಹೀಗೆ ಕುತೂಹಲಕಾರಿ ಯಾಗಿ ಸಾಗುವ ಈ ಚಿತ್ರಕ್ಕೆ ಬೆಂಗಳೂರು, ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ಭದ್ರಾವತಿ ಸುತ್ತಮುತ್ತ ಸುಮಾರು 65 ದಿನಗಳ‌ ಕಾಲ ಚಿತ್ರೀಕರಣ ಮಾಡಿದ್ದೇವೆ. ವಿಶೇಷವಾಗಿ ಹಿರಿಯ ನಟ ದ್ವಾರಕೀಶ್ ಅವರು ರಿಯಲ್ ಲೈಫ್ ಪಾತ್ರವನ್ನೇ ಮಾಡಿದ್ದಾರೆ. ಹಾಗೆ ಈ ಚಿತ್ರಕ್ಕಾಗಿ ನಾಯಕ ಮಾಡಿರುವ ಸಪೋರ್ಟ್ ಅನ್ನು ಕೂಡ ನೆನಪಿಸಿಕೊಳ್ಳುತ್ತಾ , ಈ ಮಾಯಾನಗರಿ ಚಿತ್ರವನ್ನು ಡಿಸೆಂಬರ್ ನಲ್ಲಿ ರಿಲೀಸ್ ಮಾಡುವ ಪ್ಲಾನ್ ಇದೆ ಎಂದು ಹೇಳಿದರು. ನಾಯಕ ಅನೀಶ್ ಮಾತನಾಡುತ್ತ ನಾನು ತುಂಬಾ ಇಷ್ಟಪಟ್ಟು ಮಾಡಿದಂಥ ಪಾತ್ರವಿದು. ದ್ವಾರಕೀಶ್ ರಂಥ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿದ್ದು ನನ್ನ ಅದೃಷ್ಟ. ಡೈರೆಕ್ಟರ್ ಆಗಬೇಕೆಂದು ಕನಸು ಕಾಣೋ ಹುಡುಗನ ಪಾತ್ರ ಮಾಡಿದ್ದೇನೆ, ಮುಂದಿನ ತಿಂಗಳು ತೆರೆಯ ಮೇಲೆ ಬರಲಿದೆ ನೀವೆಲ್ಲರೂ ನೋಡಿ ಸಪೋರ್ಟ್ ಮಾಡಿ ಎಂದು ಕೇಳಿಕೊಂಡರು.

 

ನಟಿ ಶ್ರಾವ್ಯ ರಾವ್ ಮಾತನಾಡಿ ಚಿತ್ರದಲ್ಲಿ ನಾನು ಮಲ್ಲಿಕಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ‌ ಕರಿಯರ್ ನಲ್ಲೇ ಒಂದು ಬೆಸ್ಟ್ ಪಾತ್ರ. ತುಂಬಾ ಶೇಡ್ಸ್ ಇದೆ ಎಂದರು. ಮತ್ತೊಬ್ಬ‌ ನಟ ಭರತ್ ಮಾತನಾಡಿ ತನ್ನ ಪಾತ್ರ ಪರಿಚಯಿಸಿಕೊಂಡರು. ಇನ್ನು ಚಿತ್ರದಲ್ಲಿ ಹಲವಾರು ವಿಶೇಷತೆಗಳಿದ್ದು, ಅದನ್ನು ಹಂತ ಹಂತವಾಗಿ ಪರಿಚಯಿಸುವ ಆಲೋಚನೆ ಶಂಕರ್ ಅವರಿಗಿದೆ. ಸ್ಯಾಂಡಲ್ ವುಡ್ ಪಿಕ್ಚರ್ಸ್ ಬ್ಯಾನರ್ ಅಡಿ, ನಿರ್ಮಾಣವಾಗಿರುವ ಈ ಚಿತ್ರಕ್ಕೆ ಶ್ವೇತಾ ಶಂಕರ್ ಸಹ ನಿರ್ಮಾಣವಿದೆ. ತಾಂತ್ರಿಕವಾಗಿ ಅದ್ಧೂರಿಯಾಗಿ ಮೂಡಿ ಬಂದಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್ ಮೋರ್ ಫೈಟ್ ಕಂಪೋಸ್ ಮಾಡಿದ್ದಾರೆ. ಮದನ್ – ಹರಿಣಿ ಹಾಗೂ ಮುರಳಿ ನೃತ್ಯ ನಿರ್ದೇಶನ, ವಿಜಯ್ ಎಂ ಕುಮಾರ್ ಸಂಕಲನ, ಶ್ರೀನಿವಾಸ್ ಕ್ಯಾಮೆರಾ ಕೈಚಳಕ ಈ ಚಿತ್ರಕ್ಕಿದೆ. ಈ ಚಿತ್ರದಲ್ಲಿ ಶರತ್ ಲೋಹಿತಾಶ್ವ, ಅವಿನಾಶ್, ಸುಚೇಂದ್ರ ಪ್ರಸಾದ್, ಎಡಕಲ್ಲು ಗುಡ್ಡದ ಚಂದ್ರಶೇಖರ್, ಚಿಕ್ಕಣ್ಣ, ಗಿರಿ ದಿನೇಶ್ ಹಾಗೂ ನಿಹಾರಿಕಾ ಚಿತ್ರದ ತಾರಬಳಗದಲ್ಲಿದ್ದಾರೆ.
ಸದ್ಯ ಬಿಡುಗಡೆ ಆಗಿರುವ ಈ ಹಾಡು ಎಲ್ಲರ ಗಮನ ಸೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ತಂಡ ಹೆಚ್ಚಿನ ಮಾಹಿತಿಯನ್ನು ನೀಡಲಿದೆಯಂತೆ.

error: Content is protected !!