Cini NewsSandalwood

ಪ್ರಪಂಚದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ “UI” ಚಿತ್ರ ಬಿಡುಗಡೆ

ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ , ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ , ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಒಂಭತ್ತು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ “UI” ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 2000ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದ್ದು, ಪೋಸ್ಟರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಕುತೂಹಲ ಮೂಡಿಸಿರುವ ಈ ಚಿತ್ರವನ್ನು ನೋಡಲು ಉಪೇಂದ್ರ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಈಗಾಗಲೇ ಮುಂಗಡ ಟಿಕೆಟ್ ಬುಕಿಂಗ್ ಆಗಿದ್ದು , ಬಹುತೇಕ ಆಲ್ಮೋಸ್ಟ್ ಫುಲ್ ಆಗಿದ್ದು , ಅಭಿಮಾನಿಗಳು ಚಿತ್ರ ನೋಡಲು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ಈ ಚಿತ್ರವನ್ನು ಅದ್ದೂರಿಯಾಗಿ ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ನವೀನ್ ಮನೋಹರ್ ಅವರ ಸಹ ನಿರ್ಮಾಣ ಹಾಗೂ ತುಳಸಿರಾಮ ನಾಯ್ಡು(ಲಹರಿ ವೇಲು), ಜಿ.ರಮೇಶ್, ಜಿ.ಆನಂದ್, ಚಂದ್ರು ಮನೋಹರನ್ ಹಾಗೂ ನಾಗೇಂದ್ರ ಅವರು ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ.

ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಹೆಸರಾಂತ ಕೆ.ವಿ.ಎನ್ ಪ್ರೊಡಕ್ಷನ್ಸ್ ಸಂಸ್ಥೆ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ‌. ವಾರ್ನರ್ ಮೂಲಕವೇ ui ಭರ್ಜರಿ ಸದ್ದನ್ನ ಮಾಡಿದ್ದು , ಈ ಚಿತ್ರ ಬೇರೆ ಏನು ಹೇಳಲು ಹೊರಟಿದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.

 

error: Content is protected !!